ಭಾರತದಲ್ಲಿ 24 ಗಂಟೆಗಳಲ್ಲಿ 24879 ಮಂದಿಗೆ ಕೊರೋನಾ, 21,129 ಮಂದಿ ಸಾವು; ಸೋಂಕಿತರ ಸಂಖ್ಯೆ 7.67 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ಏರುಗತಿ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಗುರುವಾರ ಒಂದೇ ದಿನ 24879 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಏರುಗತಿ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಗುರುವಾರ ಒಂದೇ ದಿನ 24879 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದು ದೇಶದಲ್ಲಿ ದಾಖಲಾದ ಎರಡನೇ ದೈನಂದಿನ ಗರಿಷ್ಠ ಎನಿಸಿಕೊಂಡಿದೆ. ಈ ಮೂಲಕ ಸತತ 7ನೇ ದಿನವೂ 20 ಸಾವಿರಕ್ಕಿಂತಲೂ ಅಧಿಕ ಪ್ರಕರಣ ದಾಖಲಾಗಿದೆ. ಇದೇ ವೇಳೆ ದೇಶದಲ್ಲಿ ಒಂದೇ ದಿನ 487 ಮಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 21,129ಕ್ಕೆ ತಲುಪಿದೆ.

ಇದೇ ವೇಳೆ 7,67,296 ಮಂದಿ ಸೋಂಕಿತರ ಪೈಕಿ 476378 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನು ದೇಶದಲ್ಲಿ 269789 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಮಹಾರಾಷ್ಟ್ರದಲ್ಲಿ 6,603 ಮಂದಿ ಕೊರೋನಾಗೆ ತುತ್ತಾಗಿದ್ದು, ಸೋಂಕಿತರ ಸಂಖ್ಯೆ 2,23,724ಕ್ಕೆ ಏರಿಕೆಯಾಗಿದೆ. 198 ಸಾವಿನೊಂದಿಗೆ ಮೃತರ ಸಂಖ್ಯೆ 9448ಕ್ಕೆ ಏರಿಕೆಯಾಗಿದ್ದು, 10 ಸಾವಿರ ಗಡಿಗೆ ಸಮೀಪಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com