ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.9ರವರೆಗೂ 1,07,40,832 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ನಿನ್ನೆ ಕೂಡ 22,752 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದರೊಂದಿಗೆ ಸೋಂಕಿತರ ಸಂಖ್ಯೆ  7,42,417ಕ್ಕೆ ತಲುಪಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com