ಉತ್ತರಪ್ರದೇಶ: 8 ಮಂದಿ ಪೊಲೀಸರ ಹತ್ಯೆಗೈದಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆ ಬಂಧನ

8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರದ ಮೂಲಗಳು ಗುರುವಾರ ಮಾಹಿತಿ ನೀಡಿವೆ. 

Published: 09th July 2020 10:03 AM  |   Last Updated: 09th July 2020 01:16 PM   |  A+A-


vikas dubey arrested

ರೌಡಿ ವಿಕಾಸ್ ದುಬೆ ಬಂಧಿಸಿದ ಪೊಲೀಸರು

Posted By : Manjula VN
Source : ANI

ಕಾನ್ಪುರ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರದ ಮೂಲಗಳು ಗುರುವಾರ ಮಾಹಿತಿ ನೀಡಿವೆ. 

ಇಂದು ಬೆಳಿಗ್ಗೆಯಷ್ಟೇ ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಉತ್ತರಪ್ರದೇಶ ರಾಜ್ಯದಲ್ಲಿ 60 ಅಪರಾಧ ಕೇಸುಗಳಿದ್ದ ವಿಕಾಸ್ ದುಬೆ ಎಂಬ ಪಾತಕಿಯನ್ನು ಬಂಧಿಸಲು ಪೊಲೀಸರು ದಿಕ್ರು ಎಂಬ ಗ್ರಾಮಕ್ಕೆ ಕಳೆದ ಶುಕ್ರವಾರ ನಸುಕಿನ ಜಾವ ತೆರಳಿದಾಗ ಮೊದಲ ಎನ್'ಕೌಂಟರ್ ನಡೆದಿತ್ತು. ಪೊಲೀಸರು ಬರುವ ಸುಳಿವು ಅರಿತಿದ್ದ ವಿಕಾಸ್ ದುಬೆ ಸಹಚರರು, ರಸ್ತೆಗೆ ಅಡ್ಡಲಾಗಿ ಕಲ್ಲು-ಕಟ್ಟಿಗೆಗಳನ್ನು ಇಟ್ಟಿದ್ದರು. 

ಪೊಲೀಸರು ಇವನ್ನು ತೆರವುಗೊಳಿಸಿ ದುಬೆ ಅವಿತಿದ್ದ ಮನೆಯತ್ತ ಆಗಮಿಸಲು ಅಣಿಯಾಗುತ್ತಿದ್ದಂತೆಯೇ ಆತನ ಮನೆಯ ಮೇಲಿಂದ ಕ್ರಿಮಿನಲ್'ಗಳು ಗುಂಡಿನ ಮಳೆಗೆರೆದಿದ್ದಾರೆ. ಆಗ ಗುಂಡೇಟು ತಿಂದ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ 4 ಪೇದೆಗಳು ಅಸುನೀಗಿದ್ದರು.

ಕ್ರಿಮಿನಲ್ ಗಳು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು. ಪೊಲೀಸರು ಈ ಹಿಂದೆ ಹೊಂದಿದ್ದ ಶಸ್ತ್ರಾಸ್ತ್ರಗಳು ದುಬೆಗೆ ದೊರೆತಿದ್ದು, ಅವುಗಳನ್ನೇ ಪೊಲೀಸರ ಮೇಲೆ ದಾಳಿ ನಾಡಲು ದುಬೆ ಸಹಚರರು ಬಳಸಿದ್ದರು. ಇದಕ್ಕೆ ಪ್ರತಿಯಾಗಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರೇಮ್ ಪ್ರಕಾಶ್ ಪಾಂಡೆ ಹಾಗೂ ಅತುಲ್ ದುಬೆ ಎಂಬ ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದರು.

Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp