ಮಹಾರಾಷ್ಟ್ರ: ಒಂದೇ ದಿನ 6,875 ಹೊಸ ಪ್ರಕರಣ ಪತ್ತೆ, 219 ಸಾವು; ಸೋಂಕಿತರ ಸಂಖ್ಯೆ 2,30,599ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 6,875 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,30,599ಕ್ಕೇರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 6,875 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,30,599ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಗುರುವಾರ ಒಂದೇ ದಿನ 6,875 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,30,599ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 219 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 9,667ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ 4067 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,27,259ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 93,652‬ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com