ಅಸ್ಸಾಂನಲ್ಲಿ ಭಾರೀ ಮಳೆ: ಅಣೆಕಟ್ಟು ಒಡೆದು ಗ್ರಾಮಗಳು ಜಲಾವೃತ; ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ

ನಿರಂತರ ಮಳೆಯಿಂದಾಗಿ ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ ಉಂಟಾಗಿ ಅಸ್ಸಾಂನ ದುಬ್ರಿ ಜಿಲ್ಲೆಯ ಅಣೆಕಟ್ಟು ಒಡೆದು ಪ್ರವಾಹ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಗ್ರಾಮಗಳ ಮುಳುಗಡೆ
ಗ್ರಾಮಗಳ ಮುಳುಗಡೆ

ಅಸ್ಸಾಂ: ನಿರಂತರ ಮಳೆಯಿಂದಾಗಿ ಬ್ರಹ್ಮಪುತ್ರ ನದಿ ನೀರಿನ ಮಟ್ಟದಲ್ಲಿ ಏರಿಕೆ ಉಂಟಾಗಿ ಅಸ್ಸಾಂನ ದುಬ್ರಿ ಜಿಲ್ಲೆಯ ಅಣೆಕಟ್ಟು ಒಡೆದು ಪ್ರವಾಹ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕಳೆದ ಮೂರು ದಿನಗಳಿಂದ ಬ್ರಹ್ಮಪುತ್ರ ನದಿಪಾತ್ರದಲ್ಲಿ ಮಳೆಯಾಗುತ್ತಿದ್ದು, ನದಿ ಮಟ್ಟಕ್ಕಿಂತ ಹೆಚ್ಚಿನ ನೀರು ಹರಿಯುತ್ತಿದೆ. ಇದರಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನ ಜಾನುವಾರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನದಿಯಲ್ಲಿ ಹೆಚ್ಚಿನ ನೀರು ಹರಿದ ಪರಿಣಾಮ ಇಲ್ಲಿನ ಅಣೆಕಟ್ಟೆಯೊಂದು ಒಡೆದು, ಹಲವು ಗ್ರಾಮಗಳು ಮುಳುಗಡೆಯಾಗಿವೆ,

ದಿಬ್ರುಗರ್ ಪ್ರದೇಶದ ಮೋಹ್ನಾ ಗ್ರಾಮದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದ್ದು ಹಲವು ಮನೆಗಳು ಮುಳುಗಡೆಯಾಗಿವೆ. ಜನರು ಮನೆ, ಆಹಾರ ಸಾಮಗ್ರಿಗಳಿಗಾಗಿ ಪರದಾಡುತ್ತಿದ್ದಾರೆ. ಬ್ರಹ್ಮಪುತ್ರ ನದಿಯಲ್ಲಿ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದ್ದು ತೀವ್ರತೊಂದರೆಯುಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com