ಗಿನ್ನಿಸ್ ಪುಸ್ತಕದಲ್ಲಿ ಸ್ಥಾನ ಪಡೆದ ಭಾರತದ ಹುಲಿ ಸಮೀಕ್ಷೆ: ಜಾವಡೇಕರ್ ಮಾಹಿತಿ

ಭಾರತದಲ್ಲಿ 2018ರಲ್ಲಿ ನಡೆಸಿದ ಅತಿದೊಡ್ಡ ಕ್ಯಾಮೆರಾ ಟ್ರ್ಯಾಪ್ ಹುಲಿ ಸಮೀಕ್ಷೆ 'ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಸ್ಥಾನ ಪಡೆದಿದೆ.

Published: 11th July 2020 04:32 PM  |   Last Updated: 11th July 2020 04:32 PM   |  A+A-


Tiger census: Despite gaining over 100 tigers since 2014, Karnataka slips to second position

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ನವದೆಹಲಿ: ಭಾರತದಲ್ಲಿ 2018ರಲ್ಲಿ ನಡೆಸಿದ ಅತಿದೊಡ್ಡ ಕ್ಯಾಮೆರಾ ಟ್ರ್ಯಾಪ್ ಹುಲಿ ಸಮೀಕ್ಷೆ 'ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಸ್ಥಾನ ಪಡೆದಿದೆ.

ಈ ಸಾಧನೆಯನ್ನು ಶ್ಲಾಘಿಸಿರುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇದು ''ಆತ್ಮನಿರ್ಭರ್ ಭಾರತ''ದ ಪರಿಕಲ್ಪನೆಗೆ ನಿಜವಾದ ಉದಾಹರಣೆ ಎಂದಿದ್ದಾರೆ.

ದೇಶದ ಹುಲಿ ಜನಗಣತಿ ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ ಮತ್ತು ನಿಗದಿತ ಗುರಿಗಿಂತ ನಾಲ್ಕು ವರ್ಷಗಳ ಮೊದಲೇ ನಾವು ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಸಂಕಲ್ಪವನ್ನು ಪೂರೈಸಿದ್ದೇವೆ ಎಂದರು. 

ಈ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಳಿಮುಖವಾಗುತ್ತಿರುವ ಹುಲಿಗಳ ಸಂಖ್ಯೆಯನ್ನು ಹೆಚ್ಚಿಸುವ ಉಪಕ್ರಮದ ಭಾಗವಾಗಿ ಕಳೆದ ಹಲವಾರು ವರ್ಷಗಳಲ್ಲಿ ಹುಲಿಗಳ ಜನಸಂಖ್ಯೆಯು ಶೇ.6ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.

ಈ ಸಮೀಕ್ಷೆಯ ಭಾಗವಾಗಿ, ವಿವಿಧ ತಾಣಗಳಲ್ಲಿ ಸಾವಿರಾರು ಸ್ಥಳಗಳಲ್ಲಿ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಇರಿಸಲಾಗಿತ್ತು ಮತ್ತು ಲಕ್ಷಾಂತರ ಚಿತ್ರಗಳನ್ನು ಸೆರೆ ಹಿಡಿಯಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp