ಮುಂಬೈ: ಒಂದೇ ದಿನ 1,263 ಹೊಸ ಕೊರೋನಾ ಪ್ರಕರಣ ಪತ್ತೆ; 44 ಸಾವು

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೊರೋನಾ ವೈರಸ್ ಅರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1,263 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 92,720ಕ್ಕೆ ಏರಿಕೆಯಾಗಿದೆ.
ಮುಂಬೈ
ಮುಂಬೈ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೊರೋನಾ ವೈರಸ್ ಅರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1,263 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 92,720ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಬಿಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಭಾನುವಾರ ಒಂದೇ ದಿನ 1,263 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 92,720ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮುಂಬೈಲ್ಲಿ ಕೊರೋನಾ ಸೋಂಕಿಗೆ 44 ಮಂದಿ ಬಲಿಯಾಗಿದ್ದು,  ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,285ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 1441 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮುಂಬೈನಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 64,872ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,556ರಷ್ಟಿದೆ.  

ಪುಣೆಯಲ್ಲೂ ಮಾರಕ ವೈರಸ್ ಆರ್ಭಟ
ಇತ್ತ ಪುಣೆಯಲ್ಲೂ ಮಾರಕ ವೈರಸ್ ಆರ್ಭಟ ಜೋರಾಗಿದ್ದು, ಭಾನುವಾರ ಒಂದೇ ದಿನ 1,088 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 38,502 ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಪುಣೆಯಲ್ಲಿ ಕೊರೋನಾ ಸೋಂಕಿಗೆ 39 ಮಂದಿ  ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 1,075ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 4194 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ಪ್ರಸ್ತುತ ಪುಣೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,890ರಷ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com