ರಾಜಸ್ಥಾನದಲ್ಲೂ ರಾಜಕೀಯ ಬಿಕ್ಕಟ್ಟು: ಶಾಸಕರ ಸಭೆ ಕರೆದ ಸಿಎಂ ಅಶೋಕ್ ಗೆಹ್ಲೋಟ್

ಮಧ್ಯ ಪ್ರದೇಶ ನಂತರ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ. 
ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್
ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್

ರಾಜಸ್ಥಾನ: ಮಧ್ಯ ಪ್ರದೇಶ ನಂತರ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ. 

ಈ ಮಧ್ಯ, ಹಲವು ಸಚಿವರು ಹಾಗೂ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್ ಅವರ ನಿವಾಸಕ್ಕೆ ತೆರಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಕಡೆ  ಡಿಸಿಎಂ ಸಚಿನ್​ ಪೈಲಟ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ತಮ್ಮ ಸರ್ಕಾರವನ್ನ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದೆ. ಹಣದ ಆಮಿಷವೊಡ್ಡಿ ಕಾಂಗ್ರೆಸ್​ ಹಾಗೂ ಪಕ್ಷೇತರ ಶಾಸಕರನ್ನ ಸೆಳೆಯಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್​ ಆರೋಪ ಮಾಡಿದ ಬೆನ್ನಲ್ಲೇ ಈ ಎಲ್ಲಾ ಬೆಳವಣಿಗೆಗಳು ನಡೆದಿವೆ.

ಸಿಎಂ ಅಶೋಕ್​​ ಗೆಹ್ಲೋಟ್ ಅವರು ಇಂದು ರಾತ್ರಿ ತಮ್ಮ ಬೆಂಬಲಿಗ ಶಾಸಕರ ಸಭೆ ಕರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನು ಅಶೋಕ್​​ ಗೆಹ್ಲೋಟ್​ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಬಿಜೆಪಿ, ಈ ಬೆಳವಣಿಗೆಗಳು ಗೆಹ್ಲೋಟ್ ಮತ್ತು ಪೈಲಟ್ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವುದನ್ನು ಪ್ರತಿಬಿಂಬಿಸುತ್ತವೆ ಎಂದು ತಿರುಗೇಟು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com