ಮುಂಬೈ: ರಾಜಭವನದ 18 ಸಿಬ್ಬಂದಿಗೆ ಕೊರೋನಾ ಸೋಂಕು

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ರಾಜಭವನದ 18 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.
ಮುಂಬೈ ರಾಜಭವನ
ಮುಂಬೈ ರಾಜಭವನ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ರಾಜಭವನದ 18 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ರಾಜ್ಯಪಾಲರ ನಿವಾಸ ರಾಜಭವನದಲ್ಲಿನ ಸಿಬ್ಬಂದಿಗಳು ಸ್ವಯಂ ಪ್ರೇರಣೆಯಿಂದ ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ. 

ನಂತರ ಬೃಹತ್ ಮುನ್ಸಿಪಾಲ್ ಕಾರ್ಪೋರೇಷನ್ ನಿಂದ ಮತ್ತೆ ಅವರನ್ನು ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿರುವುದಾಗಿ
ಬಿಎಂಸಿ ಮೂಲಗಳಿಂದ ತಿಳಿದುಬಂದಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ರುದ್ರತಾಂಡವವಾಡುತ್ತಿದ್ದು, ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್, ಅವರ ಮಗ ಅಭಿಷೇಕ್ ಬಚ್ಚನ್, ನಟಿ ರೇಖಾ ಕೂಡಾ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com