ದೇಶದಲ್ಲಿ ಕೊರೋನಾ ಗುಣಮುಖ ಪ್ರಮಾಣ ಶೇ 62.78 ಕ್ಕೆ ಏರಿಕೆ, 5 ಲಕ್ಷ ಗಡಿ ದಾಟಿದ ಗುಣಮುಖರ ಸಂಖ್ಯೆ

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಇತ್ತ ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕಿನಿಂದ ಗುಣಮುಖರ ಪ್ರಮಾಣ ಕೂಡ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಇತ್ತ ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕಿನಿಂದ ಗುಣಮುಖರ ಪ್ರಮಾಣ ಕೂಡ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಗುಣಮುಖರಾಗುತ್ತಿರುವ ಪ್ರಮಾಣ ಶೇ 62.78 ಕ್ಕೆ ಏರಿಕೆಯಾಗಿದೆ.  ಆಶಾದಾಯಕ ಬೆಳವಣಿಗೆ ಎಂದರೆ ದೇಶಾದ್ಯಂತ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಒಟ್ಟು 5,15,386 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲಿ 16,872 ಜನರು ಗುಣಮುಖರಾಗಿದ್ದಾರೆ.

ಲಡಖ್, ಛತ್ತೀಸ್‌ಗಢ, ಉತ್ತರಾಖಂಡ್, ದೆಹಲಿ ಮತ್ತು ರಾಜಸ್ಥಾನದಲ್ಲಿ ಚೇತರಿಕೆ ದರ ಶೇಕಡ 76 ಕ್ಕಿಂತ ಹೆಚ್ಚಿದೆ. ಕೊರೋನಾ ಸೋಂಕಿನಿಂದ ಗುಣಮುಖರಾದ ರಾಜ್ಯಗಳ ಪೈಕಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದ್ದರೆ, ದೆಹಲಿ ಎರಡು ಮತ್ತು ತಮಿಳುನಾಡು ಮೂರನೇ ಸ್ಥಾನದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com