ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಮತ್ತು ಜಮಾತ್ ಸದಸ್ಯರ ಬಂಧನ

ಪ್ರತ್ಯೇಕತಾವಾದಿ ಟೆಹ್ರೀಕ್ ಇ ಹುರ್ರಿಯತ್ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಮತ್ತು ನಿಷೇಧಿತ ಜಮಾತ್-ಇ-ಇಸ್ಲಾಮಿ ಸಂಘಟನೆಯ ಕೆಲ ಸದಸ್ಯರನ್ನು ಬಂಧಿಸಲಾಗಿದ್ದು, ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

Published: 12th July 2020 10:42 AM  |   Last Updated: 12th July 2020 10:56 AM   |  A+A-


Kashmiri separatist leader Mohammad Ashraf Sehrai

ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಅಶ್ರಫ್ ಸೆಹ್ರಾಯ್

Posted By : Sumana Upadhyaya
Source : PTI

ಶ್ರೀನಗರ:ಪ್ರತ್ಯೇಕತಾವಾದಿ ಟೆಹ್ರೀಕ್ ಇ ಹುರ್ರಿಯತ್ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಮತ್ತು ನಿಷೇಧಿತ ಜಮಾತ್-ಇ-ಇಸ್ಲಾಮಿ ಸಂಘಟನೆಯ ಕೆಲ ಸದಸ್ಯರನ್ನು ಬಂಧಿಸಲಾಗಿದ್ದು, ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನ ಪರ ಟೆಹ್ರೀಕ್-ಇ-ಹುರ್ರಿಯತ್ ಸಂಘಟನೆಯ ಅಧ್ಯಕ್ಷ ಅಶ್ರಫ್ ಸೆಹ್ರಾಯ್ ಆಗಿದ್ದಾರೆ. ಆತನ ಜೊತೆಗೆ ಇನ್ನೂ ಅನೇಕ ಸಂಘಟನೆ ಸದಸ್ಯರನ್ನು ಕಸ್ಟಡಿಗೆ ಕರೆದೊಯ್ಯಲಾಗಿದೆ ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 5.30ರ ಹೊತ್ತಿಗೆ ಬರ್ಜುಲ್ಲಾ ಭಗತ್ ನಲ್ಲಿರುವ ಸೆಹ್ರಾಯ್ ನಿವಾಸಕ್ಕೆ ತಲುಪಿದ ಪೊಲೀಸರು ಬಂಧಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಮಾಡಿದ ನಂತರ ಸೆಹ್ರಾಯ್ ಕಳೆದ ಆಗಸ್ಟ್ 5ರಿಂದ ಗೃಹಬಂಧನದಲ್ಲಿದ್ದರು.

ರಾಜಕೀಯದಿಂದ ಸಂಪೂರ್ಣ ದೂರವಿರುವುದಾಗಿ ಪ್ರತ್ಯೇಕತಾವಾದಿ ಹಿರಿಯ ನಾಯಕ ಸೈಯದ್ ಆಲಿ ಶಾ ಗಿಲಾನಿ ಘೋಷಿಸಿದ ಕೆಲ ದಿನಗಳ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಸೆಹ್ರ್ಯಾಯ್ ಪುತ್ರ ಜುಡೇಜ್ ಸೆಹ್ರಾಯ್ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ವಿಭಾಗೀಯ ಕಮಾಂಡರ್ ಆಗಿದ್ದು ಕಳೆದ ಮೇ ತಿಂಗಳಲ್ಲಿ ನಗರದ ಹೊರವಲಯ ನವಕದಲ್ ಪ್ರದೇಶದಲ್ಲಿ ಎನ್ ಕೌಂಟರ್ ನಲ್ಲಿ ಹತನಾಗಿದ್ದ.

Stay up to date on all the latest ರಾಷ್ಟ್ರೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp