ಮೋದಿ ಅಧಿಕಾರಾವಧಿಯಲ್ಲಿ ಚೀನಾ ಕಸಿದುಕೊಂಡಿದ್ದ ಮಾತೃ ಭಾರತದ ಪವಿತ್ರ ಭೂಮಿ ಕತೆಯೇನಾಯಿತು?: ರಾಹುಲ್ ಪ್ರಶ್ನೆ

ಲಡಾಖ್ ಗಡಿಯಲ್ಲಿ ಚೀನಾ, ಭಾರತ ಸೇನಾಪಡೆಗಳ ನಡುವೆ ನಡೆದ ಸಂಘರ್ಷ ಕುರಿತಂತೆ ಮತ್ತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಾಗ್ದಾಳಿ ಮುಂದುವರೆಸಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಲಡಾಖ್ ಗಡಿಯಲ್ಲಿ ಚೀನಾ, ಭಾರತ ಸೇನಾಪಡೆಗಳ ನಡುವೆ ನಡೆದ ಸಂಘರ್ಷ ಕುರಿತಂತೆ ಮತ್ತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಾಗ್ದಾಳಿ ಮುಂದುವರೆಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಮೋದಿ ಅಧಿಕಾರಾವಧಿಯಲ್ಲಿ ಚೀನಾ ಕಸಿದುಕೊಂಡಿದ್ದ ಮಾತೃ ಭಾರತದ ಪವಿತ್ರ ಭೂಮಿ ಕತೆಯೇನಾಯಿತು? ಎಂದು ಪ್ರಶ್ನಿಸಿದ್ದಾರೆ. 

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಗಾಲ್ವಾನ್ ಗಡಿ ಸಂಘರ್ಷ ಕುರಿತು ಸುದ್ದಿ ಸಂಸ್ಥೆಯ ವರದಿಯೊಂದನ್ನು ಹಂಚಿಕೊಂಡಿದ್ದಾರೆ. 

ಲಡಾಖ್ ಗಡಿಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷ ಕುರಿತು ಹಲವು ದಿನಗಳಿಂದಲೂ ರಾಹುಲ್ ಗಾಂಧಿಯವರು ಆಡಳಿತಾರೂಢ ಮೋದಿ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. 

ಜೂನ್ ತಿಂಗಳಿನಲ್ಲಿ ಲಡಾಖ್ನ ಗಾಲ್ವಾನ್ ನಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ವೇಳೆ ಚೀನಾ ಯೋಧರ ದಾಳಿಯಲ್ಲಿ ಭಾರತೀಯ ಸೇನೆಯ 20 ಯೋಧರು ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com