ಮಹಾರಾಷ್ಟ್ರ: ಒಂದೇ ದಿನ 7,827 ಹೊಸ ಕೊರೋನಾ ಪ್ರಕರಣ ಪತ್ತೆ; 2.5 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,827 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2.5 ಲಕ್ಷ ಗಡಿ ದಾಟಿದೆ.
ಮುಂಬೈನಲ್ಲಿ ಆರೋಗ್ಯ ಕಾರ್ಯಕರ್ತರು
ಮುಂಬೈನಲ್ಲಿ ಆರೋಗ್ಯ ಕಾರ್ಯಕರ್ತರು

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,827 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2.5 ಲಕ್ಷ ಗಡಿ ದಾಟಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾನುವಾರ ಒಂದೇ ದಿನ 7,827 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,54,427ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 173  ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10,289ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 3,340 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,40,325ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,14,102ರಷ್ಟಿದೆ. ಮಹಾರಾಷ್ಟ್ರದಲ್ಲಿ 13,17,895 ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com