'ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ': ಕಪಿಲ್ ಸಿಬಲ್

ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ. ನಮ್ಮ ಅಶ್ವಶಾಲೆಗಳಿಂದ ಕುದುರೆಗಳು ಹೊರಗೆ ಬಂದ ನಂತರವಷ್ಟೇ ನಾವು ಎಚ್ಚೆತ್ತುಕೊಳ್ಳುವುದೇ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ.
ಕಪಿಲ್ ಸಿಬಲ್
ಕಪಿಲ್ ಸಿಬಲ್

ನವದೆಹಲಿ: ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ. ನಮ್ಮ ಅಶ್ವಶಾಲೆಗಳಿಂದ ಕುದುರೆಗಳು ಹೊರಗೆ ಬಂದ ನಂತರವಷ್ಟೇ ನಾವು ಎಚ್ಚೆತ್ತುಕೊಳ್ಳುವುದೇ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ, ಕಾಂಗ್ರೆಸ್ ಮತ್ತು ಸ್ವತಂತ್ರ ಶಾಸಕರಿಗೆ ಬಿಜೆಪಿಯವರು ಹಣದ ಆಮಿಷವೊಡ್ಡಿ ಪಕ್ಷಕ್ಕೆ ಸೆಳೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಆರೋಪ, ರಾಜಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಕುರಿತು ಕಪಿಲ್ ಸಿಬಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಾನವೀಯತೆಯ ಎಲ್ಲೆ ಮೀರಿ ಬಿಜೆಪಿ ನಾಯಕರು ಹೋಗುತ್ತಿದ್ದಾರೆ, ಕೊರೋನಾ ವೈರಸ್ ಸಂಕಷ್ಟದ ನಡುವೆ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅಶೋಕ್ ಗೆಹ್ಲೊಟ್ ತೀವ್ರ ವಾಗ್ದಾಳಿ ನಡೆಸಿದ್ದರು.

ಗೆಹ್ಲೊಟ್ ಆರೋಪವನ್ನು ಬಿಜೆಪಿ ನಿರಾಕರಿಸಿದ್ದು, ಕಾಂಗ್ರೆಸ್ ನೊಳಗಿನ ಬಿಕ್ಕಟ್ಟನ್ನು ಶಮನಗೊಳಿಸಲು ವಿಫಲವಾಗಿ, ರಾಜ್ಯದಲ್ಲಿ ಕೊರೋನಾ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೆ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com