ಮಹಾರಾಷ್ಟ್ರ: ಒಂದೇ ದಿನ 6,497 ಹೊಸ ಪ್ರಕರಣ ಪತ್ತೆ, 193 ಬಲಿ; 2,60,924ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,497 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,60,924ಕ್ಕೇರಿದೆ.
Published: 13th July 2020 11:34 PM | Last Updated: 13th July 2020 11:34 PM | A+A A-

ಸಂಗ್ರಹ ಚಿತ್ರ
ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,497 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,60,924ಕ್ಕೇರಿದೆ.
ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಸೋಮವಾರ ಒಂದೇ ದಿನ 6,497 ಕೊರೋನಾ ವೈರಸ್ ಕೇಸ್ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,60,924ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 193 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10,482ಕ್ಕೆ ಏರಿಕೆಯಾಗಿದೆ.
ಇನ್ನು ಇಂದು 4,182 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,44,507ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,05,637ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
6,497 #COVID19 cases, 4,182 discharged & 193 deaths reported in Maharashtra today. Total number of cases in the state is now at 2,60,924, including 1,44,507 discharged, 1,05,637 active cases & 10,482 deaths: State Health Department pic.twitter.com/4sN6SlpVDM
— ANI (@ANI) July 13, 2020