ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಕ್ರಾಂತಿಕಾರಿ ಕವಿ ವರವರ ರಾವ್ 

 ಕೋವಿಡ್-19 ಸಾಂಕ್ರಾಮಿಕ ರೋಗದ ವ್ಯಾಪಕ ಹರಡುವಿಕೆ ಹಾಗೂ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ತಾತ್ಕಾಲಿಕವಾಗಿ ಜಾಮೀನು ನೀಡುವಂತೆ ಎಲ್ಗರ್  ಪರಿಷತ್- ಮಾವೋವಾದಿ ನಂಟಿನ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಕವಿ ಹಾಗೂ ಹೋರಾಟಗಾರ ವರವರ ರಾವ್ ಬಾಂಬೆ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ.
ತೆಲುಗಿನ ಕ್ರಾಂತಿಕಾರಿ ಕವಿ ವರವರ ರಾವ್
ತೆಲುಗಿನ ಕ್ರಾಂತಿಕಾರಿ ಕವಿ ವರವರ ರಾವ್

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ವ್ಯಾಪಕ ಹರಡುವಿಕೆ ಹಾಗೂ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ತಾತ್ಕಾಲಿಕವಾಗಿ ಜಾಮೀನು ನೀಡುವಂತೆ ಎಲ್ಗರ್  ಪರಿಷತ್- ಮಾವೋವಾದಿ ನಂಟಿನ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಕವಿ ಹಾಗೂ ಹೋರಾಟಗಾರ ವರವರ ರಾವ್ ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವೈದ್ಯಕೀಯ ದಾಖಲೆಯನ್ನು ನ್ಯಾಯಾಲಯಕ್ಕೆ ಒದಗಿಸಲು ಕಾರಾಗಾೃಹ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆಯೂ 80 ವರ್ಷದ ವರವರ ರಾವ್ ಕೇಳಿಕೊಂಡಿದ್ದಾರೆ.

ತಮ್ಮ ಪರ ವಾದ ಮಂಡಿಸುತ್ತಿರುವ ವಕೀಲ ಆರ್ ಸತ್ಯ ನಾರಾಯಣ ಐಯ್ಯರ್ ಮೂಲಕ ಎರಡು ಅರ್ಜಿಗಳನ್ನು ಹೈಕೋರ್ಟ್ ಗೆ ರಾವ್ ಸಲ್ಲಿಸಿದ್ದಾರೆ. ಜೂನ್ 26 ರಂದು ವಿಶೇಷ ಎನ್ ಐಎ ನ್ಯಾಯಾಲಯ ನಿರಾಕರಿಸಿರುವ ಜಾಮೀನು ಅರ್ಜಿಯನ್ನು  ಪ್ರಶ್ನಿಸಿ ಒಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಮತ್ತೊಂದು ಅರ್ಜಿಯಲ್ಲಿ ಅವರ ವೈದ್ಯಕೀಯ ದಾಖಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನವಿ ಮುಂಬೈಯಿಯ ತಾಲೋಜ್ ಜೈಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ರಾವ್ ಕೋರಿದ್ದಾರೆ.

ರಾವ್ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿ ತಮಗೆ ತಾತ್ಕಾಲಿಕ ಜಾಮೀನು ಮಂಜೂರು ಮಾಡುವಂತೆ  ರಾವ್ ನ್ಯಾಯಾಲಯದಲ್ಲಿ ಮೊರೆ ಇಟ್ಟಿದ್ದಾರೆ. ಎರಡು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಈ ವಾರದಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com