ದೆಹಲಿ: 24 ಗಂಟೆಗಳಲ್ಲಿ 1606 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,15,346ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1606 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

Published: 14th July 2020 10:22 PM  |   Last Updated: 14th July 2020 10:22 PM   |  A+A-


Covid: Delhi to implement all MHA directions

ದೆಹಲಿ-ಕೋವಿಡ್ 19

Posted By : Srinivasamurthy VN
Source : ANI

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1606 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

ಹೌದು.. ಕಳೆದ 24 ಗಂಟೆಗಳಲ್ಲಿ 1606 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,15,346ಕ್ಕೆ ಏರಿಕೆಯಾಗಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಆರೋಗ್ಯ ಇಲಾಖೆ,  ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 35 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 3,446ಕ್ಕೆ ಏರಿಕೆಯಾಗಿದೆ. ಈ ನಡುವೆ ಇಂದು ಒಂದೇ ದಿನ 1924 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಒಟ್ಟಾರೆ 93,236  ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18664ಕ್ಕೆ ಕುಸಿದಿದೆ.

ಅಂತೆಯೇ ದೆಹಲಿಯಲ್ಲಿ ಈ ವರೆಗೂ 7,13,908 ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಇಂದು 5,650 RT-PCR ಟೆಸ್ಟ್ ಮಾಡಲಾಗಿದೆ. 15,413 ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ಮಾಡಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp