ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,526 ಹೊಸ ಸೋಂಕು ಪ್ರಕರಣ

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,526 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,526 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ತಮಿಳುನಾಡಿನಲ್ಲಿ ಇಂದು 4,526 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ  ಆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,47,324ಕ್ಕೆ ಏರಿಕೆಯಾಗಿದೆ. ಈ ಪೈಕಿ 97,310 ಮಂದಿ ಸೋಂಕಿತರು ಗುಣಮುಖಾಗಿದ್ದು, 50,014 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಅಂತೆಯೇ ಇಂದು ತಮಿಳುನಾಡಿನಲ್ಲಿ 67 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,099ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com