ಮಹಾರಾಷ್ಟ್ರ: ಒಂದೇ ದಿನ 6741 ಹೊಸ ಪ್ರಕರಣ ಪತ್ತೆ, 213 ಬಲಿ; 2,67,665ಕ್ಕೇರಿದ ಸೋಂಕಿತರ ಸಂಖ್ಯೆ    

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,741 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,67,665ಕ್ಕೇರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,741 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,67,665ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಂಗಳವಾರ ಒಂದೇ ದಿನ 6741 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,67,665ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 213 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10,695ಕ್ಕೆ ಏರಿಕೆಯಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,49,007ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,665ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com