ಮುಂಬೈನಲ್ಲಿ ಮತ್ತೆ 1,174 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 93,894 ಕ್ಕೆ ಏರಿಕೆ

ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1,174 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 93,894 ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1,174 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 93,894 ಕ್ಕೆ ಏರಿಕೆಯಾಗಿದೆ. 

ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ ಮುಂಬೈನಲ್ಲಿ 1,174 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 93,894ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು ಒಂದೇ ದಿನ 750ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ 65,622‬ ಸೋಂಕಿತರು ಗುಣಮುಖರಾಗಿದ್ದು, 22,939 ಸಕ್ರಿಯ ಪ್ರಕರಣಗಳಿವೆ. 

ಇನ್ನು ಇಂದು 47 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5291ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com