ಮಹಾರಾಷ್ಟ್ರ: ಒಂದೇ ದಿನ 7,975 ಹೊಸ ಪ್ರಕರಣ ಪತ್ತೆ, 213 ಬಲಿ; 2,75,640ಕ್ಕೇರಿದ ಸೋಂಕಿತರ ಸಂಖ್ಯೆ    

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಂಗಳವಾರ ಒಂದೇ ದಿನ 7,975 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,75,640ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 233 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10928ಕ್ಕೆ ಏರಿಕೆಯಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,52,613ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,801 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಶೇ.55.37ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.3.96ರಷ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com