ಮುಂಬೈನಲ್ಲಿ ಇಂದು 1390 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 96253 ಕ್ಕೆ ಏರಿಕೆ

ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1390 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 96,253 ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1390 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 96,253 ಕ್ಕೆ ಏರಿಕೆಯಾಗಿದೆ. 

ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ ಮುಂಬೈನಲ್ಲಿ 1390 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 96253ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು ಒಂದೇ ದಿನ 1197ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ 67830 ‬ ಸೋಂಕಿತರು ಗುಣಮುಖರಾಗಿದ್ದು, 22,959ಸಕ್ರಿಯ ಪ್ರಕರಣಗಳಿವೆ. 

ಇನ್ನು ಇಂದು 62 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5464ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.

ಧಾರಾವಿಯಲ್ಲಿ ಮತ್ತೆ 23 ಮಂದಿಗೆ ಸೋಂಕು
ಇನ್ನು ಏಷ್ಯಾದ ಅತೀ ದೊಡ್ಡ ಸ್ಲಂ ಎಂದು ಹೇಳಲಾಗುವ ಮುಂಬೈನ ಧಾರಾವಿಯಲ್ಲಿ ಇಂದು ಮತ್ತೆ 23 ಮಂದಿಗೆ ಸೋಂಕು ಒಕ್ಕರಿಸಿದೆ. ಆ ಮೂಲಕ ಇಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2415ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಪ್ರಸ್ತುತ 99 ಸಕ್ರಿಯ ಪ್ರಕರಣಗಳು ಮಾತ್ರ ಇವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com