ರಾಜಸ್ತಾನ: ಕೇಂದ್ರ ಸಚಿವ ಗಜೇಂದ್ರ ಸಿಂಗ್, ಕಾಂಗ್ರೆಸ್ ಬಂಡಾಯ ಶಾಸಕ ಬನ್ವರ್ ಲಾಲ್ ಶರ್ಮ ವಿರುದ್ಧ ಕೇಸು ದಾಖಲು, ತನಿಖೆಗೆ ಆದೇಶ

ಅಶೋಕ್ ಗೆಹ್ಲೊಟ್ ನೇತೃತ್ವದ ರಾಜಸ್ತಾನ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು ಬಂಡಾಯ ಶಾಸಕರನ್ನು ಹಣದ ಆಮಿಷವೊಡ್ಡಿ ಸೆಳೆದುಕೊಳ್ಳಲು ನೋಡುತ್ತಿದೆ ಎಂದು ಆಪಾದಿಸಿ ಇದಕ್ಕೆ ಪುಷ್ಠಿ ನೀಡುವಂತಹ ಸಂಭಾಷಣೆಯುಳ್ಳ ಆಡಿಯೊ ಟೇಪನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಂದೀಪ್ ಸುರ್ಜೆವಾಲಾ
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಂದೀಪ್ ಸುರ್ಜೆವಾಲಾ

ಜೈಪುರ: ರಾಜಸ್ತಾನ ಕಾಂಗ್ರೆಸ್ ನ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಅಶೋಕ್ ಗೆಹ್ಲೊಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು ಬಂಡಾಯ ಶಾಸಕರನ್ನು ಹಣದ ಆಮಿಷವೊಡ್ಡಿ ಸೆಳೆದುಕೊಳ್ಳಲು ನೋಡುತ್ತಿದೆ ಎಂದು ಆಪಾದಿಸಿ ಇದಕ್ಕೆ ಪುಷ್ಠಿ ನೀಡುವಂತಹ ಸಂಭಾಷಣೆಯುಳ್ಳ ಆಡಿಯೊ ಟೇಪನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಈ ಸಂಬಂಧ ಕಾಂಗ್ರೆಸ್ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಕಾಂಗ್ರೆಸ್ ಬಂಡಾಯ ಶಾಸಕ ಬನ್ವರ್ ಲಾಲ್ ಶರ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದು ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಅಕ್ರಮವಾಗಿ ಪಿತೂರಿ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ ಪಿತೂರಿಯಲ್ಲಿ ಭಾಗಿಯಾದ ಆರೋಪದ ಮೇಲೆ ಕಾಂಗ್ರೆಸ್ ಇಂದು ಇಬ್ಬರು ಬಂಡಾಯ ಶಾಸಕರಾದ ಬನ್ವರ್ ಲಾಲ್ ಶರ್ಮ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿದೆ.

ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಎರಡು ಆಡಿಯೊ ಟೇಪ್ ಗಳು ಸಿಕ್ಕಿದ್ದು ಅವುಗಳಲ್ಲಿ ಬನ್ವರ್ ಲಾಲ್ ಶರ್ಮ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸುತ್ತಿರುವುದು ಕೇಳಿಬಂದಿದೆ. ಟೇಪ್ ನಲ್ಲಿ ಒಂದು ಸ್ವರ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ರಾಜಸ್ತಾನದ ಬಿಜೆಪಿ ಹಿರಿಯ ನಾಯಕ ಮತ್ತು ಕಾಂಗ್ರೆಸ್ ಶಾಸಕ ಬನ್ವರ್ ಲಾಲ್ ಶರ್ಮದ್ದು ಇದೆ.

ಆಡಿಯೊ ಟೇಪ್ ಆಧಾರದ ಮೇಲೆ ಕಾಂಗ್ರೆಸ್ ಈ ಸಂಬಂಧ ಇಬ್ಬರು ಬಂಡಾಯ ಶಾಸಕರನ್ನು ಅಮಾನತುಗೊಳಿಸಿದೆ ಎಂದಿದ್ದಾರೆ. ಹಣದ ಆಮಿಷವೊಡ್ಡಿ ಶಾಸಕರನ್ನು ಸೆಳೆಯಲು ನೋಡಿದ ಶಾಸಕರ ವಿರುದ್ಧ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೀಡಿದ್ದ ಅನರ್ಹತೆ ನೊಟೀಸ್ ಗೆ ಸಂಬಂಧಿಸಿದಂತೆ ಸಚಿನ್ ಪೈಲಟ್ ಮತ್ತು ಇತರ ಬಂಡಾಯ ಶಾಸಕರು ಹೈಕೋರ್ಟ್ ಮೊರೆ ಹೋಗಿ ಇಂದು ಅರ್ಜಿ ವಿಚಾರಣೆ ನಡೆಯುವುದಕ್ಕೆ ಮುನ್ನ ಕಾಂಗ್ರೆಸ್ ನಲ್ಲಿ ಈ ಬೆಳವಣಿಗೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com