ಕುಲ್ಗಾಂನಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರ ಸದೆಬಡಿದ ಸೇನೆ, 3 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಎನ್ಕೌಂಟರ್ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ ಭದ್ರತಾಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಯೋಧರೂ ಕೂಡ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಜುಲೈ 5 ರಂದು ಕುಲ್ಗಾಮ್ನ ಅರೆಹ್ ಎಂಬ ಗ್ರಾಮದಲ್ಲಿ ಎನ್ಕೌಂಟರ್ ನಡೆಸಿದ್ದ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com