ರಾಜ್ಯಸಭೆಯ ನೂತನ ಸದಸ್ಯರ ಪ್ರಮಾಣ ವಚನ ಜುಲೈ 22ಕ್ಕೆ

ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರು ಜುಲೈ 22ರಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸಂಸತ್ತು(ಸಂಗ್ರಹ ಚಿತ್ರ)
ಸಂಸತ್ತು(ಸಂಗ್ರಹ ಚಿತ್ರ)

ನವದೆಹಲಿ: ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರು ಜುಲೈ 22ರಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಇದೇ ಮೊದಲ ಬಾರಿಗೆ ಸಂಸತ್ತಿನ ಇತಿಹಾಸದಲ್ಲಿ ಆಂತರ-ಅಧಿವೇಶನ ಅವಧಿಯಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಸದನದೊಳಗೆ ನಡೆಯಲಿದೆ.

ಅಧಿವೇಶನದೊಳಗೆ ಅಥವಾ ರಾಜ್ಯಸಭಾಧ್ಯಕ್ಷರ ಕಚೇರಿಯೊಳಗೆ ಕಲಾಪ ನಡೆಯದಿರುವ ಸಂದರ್ಭದಲ್ಲಿ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸುವುದು ಇದುವರೆಗೆ ನಡೆದುಕೊಂಡು ಬಂದಿರುವ ವಾಡಿಕೆ. ಆದರೆ ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ನೂತನ ಸದಸ್ಯರ ಪ್ರಮಾಣ ವಚನ ಸ್ವರೂಪ ಬೇರೆ ರೀತಿಯಿರುತ್ತದೆ.

20 ರಾಜ್ಯಗಳಿಗೆ ಕಳೆದ ತಿಂಗಳು ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ 61 ಸದಸ್ಯರು ಆಯ್ಕೆಯಾಗಿದ್ದರು. ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಅವರ ಜೊತೆ ಈ ಬಾರಿ ಕೇವಲ ಒಬ್ಬ ಸದಸ್ಯರು ಮಾತ್ರ ಭಾಗವಹಿಸಬಹುದಷ್ಟೆ ಎಂದು ನಿರ್ಬಂಧ ಹೇರಲಾಗಿದೆ ಎಂದು ರಾಜ್ಯಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 22ರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಾಗದವರಿಗೆ ಮುಂಬರುವ ಮುಂಗಾರು ಅಧಿವೇಶನದಲ್ಲಿ ಅವಕಾಶ ನೀಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com