ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ

ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗುವಾಹಟಿ: ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್ 
ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

1992ನೇ ಬ್ಯಾಚಿನ ಐಪಿಎಸ್ ಅಧಿಕಾರಿಯನ್ನು ರಾಜಧಾನಿ ಇಂಪಾಲದಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು,
ಪರಿಸ್ಥಿತಿ ಗಂಭೀರವಾಗಿದೆ.

ಇಂದು ಮಧ್ಯಾಹ್ನ 1-30ರ ವೇಳೆಯಲ್ಲಿ ಅರವಿಂದ್ ಕುಮಾರ್ ಅವರ ಕಚೇರಿಯಲ್ಲಿ ಈ ಘಟನೆ ನಡೆದಿದೆ.ತನ್ನಷ್ಟಕ್ಕೇ ತಾನೇ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಅರವಿಂದ್ ಕುಮಾರ್ ಪರಿಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಜೆ ಸುರೇಶ್ ಬಾಬು ಪತ್ರಕರ್ತರಿಗೆ ತಿಳಿಸಿದ್ದಾರೆ. ಪರಿಸ್ಥಿತಿ ಸುಧಾರಿಸಿದರೆ ಚಿಕಿತ್ಸೆಗಾಗಿ ದೆಹಲಿಗೆ ಕೊಂಡೊಯ್ಯುವುದಾಗಿ ವೈದ್ಯರಿಗೆ ಅವರು ಹೇಳಿದ್ದಾರೆ.

ಇದಕ್ಕೂ ಮುನ್ನಾ ಅರವಿಂದ್ ಕುಮಾರ್ ನವದೆಹಲಿಯಲ್ಲಿ ಗುಪ್ತಚರ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು. ಮಣಿಪುರಕ್ಕೆ ವಾಪಸ್ಸಾಗಿದ್ದ ಅವರು ಜುಲೈ 10 ರಂದು ಎಡಿಜಿಪಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com