ರಾಜಸ್ಥಾನ ಆಡಿಯೋ ಕ್ಲಿಪ್ ಪ್ರಕರಣ: ಕೇಂದ್ರ ಸಚಿವ, ಶಾಸಕರ ವಿರುದ್ಧ ಎಫ್ಐಆರ್ ದಾಖಲು

ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದ ಎರಡು ಆಡಿಯೋ ಕ್ಲಿಪ್ ಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದ ಎರಡು ಆಡಿಯೋ ಕ್ಲಿಪ್ ಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಶುಕ್ರವಾರ ನೀಡಿದ ದೂರಿನ ಆಧಾರದ ಮೇಲೆ ಇಂದು ಕಾಂಗ್ರೆಸ್ ಬಂಡಾಯ ಶಾಸಕ ಶಾಸಕ ಭನ್ವರ್ ಲಾಲ್ ಶರ್ಮಾ, ಸಂಜಯ್ ಜೈನ್ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ ಎಂದು  ಎಸಿಬಿ ಡಿಜಿ ಅಲೋಕ್ ತ್ರಿಪಾಠಿ ಅವರು ಹೇಳಿದ್ದಾರೆ.

ಈ ಹಿಂದೆ ಸೋರಿಕೆಯಾದ ಆಡಿಯೊ ಟೇಪ್‌ಗಳ ಬಗ್ಗೆ ಕಾಂಗ್ರೆಸ್ ನೀಡಿದ ಮತ್ತೊಂದು ದೂರಿನ ಆಧಾರದ ಮೇಲೆ ಸಂಜಯ್ ಜೈನ್ ಅವರನ್ನು ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಶುಕ್ರವಾರ ಬಂಧಿಸಿತ್ತು.

ಸಂಜಯ್ ಜೈನ್ ಬಿಜೆಪಿ ನಾಯಕ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಬಿಜೆಪಿ, ಸಂಜಯ್ ಜೈನ್ ಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದೆ.

ಆಡಿಯೋ ಕ್ಲಿಪ್ ಗಳನ್ನು ನಾವು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುತ್ತೇವೆ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com