ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಈ ವಾರ ಅಧಿವೇಶನ ಸಾಧ್ಯತೆ- ಮೂಲಗಳು

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದ ಬೆನ್ನಲ್ಲೇ, ಈ ವಾರ ವಿಧಾನಸಭೆ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಕಾಂಗ್ರೆಸ್ ಮುಖಂಡರು
ಕಾಂಗ್ರೆಸ್ ಮುಖಂಡರು

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದ ಬೆನ್ನಲ್ಲೇ, ಈ ವಾರ ವಿಧಾನಸಭೆ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಸಚಿನ್ ಪೈಲಟ್ ಬಣ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿರುವಂತೆಯೇ ಕಿರು ವಿಧಾನಸಭೆ ಅಧಿವೇಶನ
ಸೇರಿದಂತೆ ಎಲ್ಲಾ ರೀತಿಯ ಆಯ್ಕೆಗಳು ಸರ್ಕಾರದ ಮುಂದಿವೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಈ ಮಧ್ಯೆ, ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೇಗೆ ಮತ್ತು ಯಾವಾಗ ನಡೆಯಬೇಕೆಂದು ಸರ್ಕಾರ ಹಾಗೂ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ.ಅಗತ್ಯಕ್ಕನುಗುಣವಾಗಿ ನಡೆಯುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕೇನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶನಿವಾರ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸುಮಾರ್ 45 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಆದಾಗ್ಯೂ, ಸಾಂಕ್ರಾಮಿಕ ರೋಗದಿಂದ ರಾಜ್ಯವನ್ನು ಕಾಪಾಡುವುದರ ಕುರಿತಂತೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ಚರ್ಚೆ ನಡೆಸಿದ್ದಾರೆ ಎಂದು ರಾಜ ಭವನದ ವಕ್ತಾರರೊಬ್ಬರು ತಿಳಿಸಿದ್ದಾರೆ.

ಆದರೆ, ಮೂಲಗಳ ಪ್ರಕಾರ, ಕಿರು ಅಧಿವೇಶನ ಕರೆಯುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com