ಭಾರತದಲ್ಲಿ ಈವರೆಗೂ 1.43 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 3,33,395 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 3,33,395 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದೇಶಾದ್ಯಂತ 3,58,127 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.20ರವರೆಗೂ 1,43,81,303 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಮಂಗಳವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 587 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 28084 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com