ಪಾತಕಿ ವಿಕಾಸ್ ದುಬೆ ಎನ್‌ಕೌಂಟರ್: ತನಿಖಾ ಆಯೋಗಕ್ಕೆ ಸುಪ್ರೀಂ ಕೋರ್ಟ್‍ ನಿವೃತ್ತ ನ್ಯಾಯಮೂರ್ತಿ ನೇತೃತ್ವ

ಕಾನ್ಪುರದ ಪಾತಕಿ ವಿಕಾಸ್ ದುಬೆ ಮತ್ತು ಅವನ ಐವರು ಸಹಚರರ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್‍ ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಚೌಹಾನ್ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕಾನ್ಪುರದ ಪಾತಕಿ ವಿಕಾಸ್ ದುಬೆ ಮತ್ತು ಅವನ ಐವರು ಸಹಚರರ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್‍ ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಚೌಹಾನ್ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ.
 
ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿ ಚೌಹಾಣ್ ಅವರ ಹೆಸರನ್ನು ನ್ಯಾಯಾಲಯಕ್ಕೆ ಸೂಚಿಸಿದರು.ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಈ ಸಲಹೆಯನ್ನು ಅಂಗೀಕರಿಸಿತು.

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಶಶಿ ಕಾಂತ್ ಅಗರ್‍ ವಾಲ್‍ ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಕೆ ಎಲ್ ಗುಪ್ತಾ. ವಿಚಾರಣಾ ಆಯೋಗದ ಇತರ ಇಬ್ಬರು ಸದಸ್ಯರಾಗಿರುತ್ತಾರೆ. 

ಆಯೋಗ ಒಂದು ವಾರದಲ್ಲಿ ತನ್ನ ಕಾರ್ಯವನ್ನು ಆರಂಭಿಸಿ, ಎರಡು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸಬೇಕಾಗುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ. ವಿಚಾರಣಾ ಆಯೋಗವು ನಡೆಸಲಿರುವ ತನಿಖೆಯ ವ್ಯಾಪ್ತಿ ಸಾಕಷ್ಟು ಸ್ತಾರವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಚೌಹಾನ್ ಅವರೊಂದಿಗೆ ಅನೇಕ ಪ್ರಕರಣಗಳ ವಿಚಾರಣೆ ನಡೆಸಿರುವುದಾಗಿ ಮುಖ್ಯ ನ್ಯಾಯಮೂರ್ತಿ ಬೊಬ್ಡೆ ವಿಚಾರಣೆ ವೇಳೆ ಹೇಳಿದ್ದಾರೆ. ನ್ಯಾಯಮೂರ್ತಿ ಚೌಹಾನ್ ಅವರ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿರುವುದಾಗಿ ಎಂದು ಅರ್ಜಿದಾರರಾದ ಅನುಪ್ ಪ್ರಕಾಶ್ ಅವಸ್ಥಿ ಮತ್ತು ಘನಶ್ಯಾಮ್‍ ಉಪಾಧ್ಯಾಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com