ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಸೇನೆ ದಾಳಿ: ಶಸ್ತ್ರಾಸ್ತ್ರ, ಸ್ಫೋಟಕ ಸಾಮಾಗ್ರಿಗಳು ವಶ

ಜಮ್ಮು ಮತ್ತು ಕಾಶ್ಮೀರ ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ 38 ರಾಷ್ಟ್ರೀಯ ರೈಫಲ್ಸ್ ಸೇನಾಪಡೆಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ 38 ರಾಷ್ಟ್ರೀಯ ರೈಫಲ್ಸ್ ಸೇನಾಪಡೆಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ. 

ರಜೌರಿಯ ಠಾಣಾಮಂಡಿ ಎಂಬ ಪ್ರದೇಶದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ನಡೆಸಿದ್ದು, 1  ಗನ್, ಚೀನಾ ಮೂಲದ 1 ಪಿಸ್ತೂಲ್, 168 ಸುತ್ತಿನ ಗುಂಡು, ಎಕೆ 47, 2 ಯುಬಿಜಿಎಲ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಠಾಣಾಮಂಡಿಯಲ್ಲಿ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಗಳು ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿತ್ತು. ಇದರಂತೆ ದಾಳಿ ನಡೆಸಿ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಸೇನಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com