ಪತ್ರಕರ್ತನ ಕೊಲೆ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆ ಹುಟ್ಟುಹಾಕಿದೆ: ದೆಹಲಿ ಸಿಎಂ ಕೇಜ್ರೀವಾಲ್‌

ಪತ್ರಕರ್ತ ವಿಕ್ರಂ ಜೋಶಿ ಅವರ ಹತ್ಯೆಗೆ ಖೇದ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಪತ್ರಕರ್ತ ವಿಕ್ರಂ ಜೋಶಿ ಅವರ ಹತ್ಯೆಗೆ ಖೇದ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

ತಮ್ಮ ನಾದಿನಿಗೆ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಿದ್ದ ಉತ್ತರ ಪ್ರದೇಶದ ಪತ್ರಕರ್ತ ವಿಕ್ರಂ ಜೋಶಿ ಅವರ ಮೇಲೆ ಜು. 20ರಂದು ಗಾಜಿಯಾಬಾದ್‌ ನ ವಿಜಯನಗರ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜೋಶಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ವಿಕ್ರಂ ಜೋಶಿ ಅವರ ಹತ್ಯೆ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಿಕ್ರಂ ಜೋಶಿ ಅವರ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ನಿಧನರಾದ ನಿರ್ಭೀತ ಪತ್ರಕರ್ತ ವಿಕ್ರಮ್ ಜೋಶಿ ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ. ತನ್ನ ಸಂಬಂಧಿಗೆ ಕಿರುಕುಳ ನೀಡಿದವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಕ್ಕಾಗಿ ಉತ್ತರ ಪ್ರದೇಶದಲ್ಲಿ ಅವರ ಮೇಲೆ ಗುಂಡು ಹಾರಿಸಲಾಯಿತು. ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇದು ಆಘಾತಕಾರಿ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com