ಕಂದಮಾಲ್‌ನಲ್ಲಿ ಪೊಲೀಸರೊಂದಿಗೆ ಗುಂಡಿನ ಚಕಮಕಿ: ಇಬ್ಬರು ನಕ್ಸಲ್ ಸಾವು

ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಎಡಪಂಥೀಯ ಉಗ್ರವಾದಿಗಳ ಬಿಜಿಎನ್ ವಿಭಾಗದ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ನಕ್ಸಲ್
ನಕ್ಸಲ್

ಭುವನೇಶ್ವರ: ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಎಡಪಂಥೀಯ ಉಗ್ರವಾದಿಗಳ ಬಿಜಿಎನ್ ವಿಭಾಗದ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.

ನಿರ್ದಿಷ್ಟ ಮಾಹಿತಿ ಆಧರಿಸಿ ಕಂದಮಾಲ್‌ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಮತ್ತು ಡಿವಿಎಫ್‌ನ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದರು. 

ಭದ್ರತಾ ಸಿಬ್ಬಂದಿಯನ್ನು ಗಮನಿಸಿದ ನಕ್ಸಲರು ಎಸ್‌ಒಜಿ ಮತ್ತು ಡಿವಿಎಫ್ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಸ್ಪರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು  ಒಡಿಶಾ ಡಿಜಿಪಿ ಅಭಯ ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಘಟನಾ ಸ್ಥಳದಿಂದ ಒಂದು ಶಸ್ತ್ರಾಸ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಈ ಪ್ರದೇಶದಲ್ಲಿ ಮತ್ತಷ್ಟು ನಕ್ಸಲರ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com