ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದಾತನ ನೆರವಿಗೆ ನಿಂತ ನಟ ಸೋನು ಸೂದ್

ನಟ ಸೋನು ಸೂದ್ ತಮ್ಮ ಪರೋಪಕಾರಿ ಗುಣದ ಮೂಲಕ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದಾತನ ನೆರವಿಗೆ ನಿಲ್ಲುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.
ನಟ ಸೋನು ಸೂದ್
ನಟ ಸೋನು ಸೂದ್

ಮುಂಬೈ: ನಟ ಸೋನು ಸೂದ್ ತಮ್ಮ ಪರೋಪಕಾರಿ ಗುಣದ ಮೂಲಕ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದಾತನ ನೆರವಿಗೆ ನಿಲ್ಲುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ಯಾರಾದರೂ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ಲಾಕ್‍ಡೌನ್ ಸಮಯದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ಕಾರ್ಯ ಮಾಡುವ ಮೂಲಕ ಸುದ್ದಿಯಾಗಿದ್ದ ಸೋನು ಸೂದ್, ಸುಮಾರು 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ್ದರು. ಇತ್ತೀಚೆಗೆ ಮಹಾರಾಷ್ಟ್ರ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಕರ್ತವ್ಯ ಮೆರೆದಿದ್ದರು. ಇದೀಗ ಹಸು ವಾಪಸ್ ಮಾಡುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಮತ್ತೆ ಟ್ವೀಟಿಗರ ಮೆಚ್ಚುಗೆಗೆ ಸೂದ್ ಪಾತ್ರರಾಗಿದ್ದಾರೆ. 

ಕೋವಿಡ್ 19 ಲಾಕ್‍ಡೌನ್ ಪರಿಣಾಮ ಶಾಲೆಗಳು ಮಕ್ಕಳಿಗೆ ಆನ್‍ಕ್ಲಾಸ್ ಆರಂಭಿಸಿವೆ. ಆದರೆ ಹಿಮಾಚಲ ಪ್ರದೇಶದಲ್ಲಿ ಕಡು ಬಡ ಕುಟುಂಬದ ಕುಲ್ದೀಪ್ ಕುಮಾರ್ ತನ್ನ ಮಕ್ಕಳು ಇತರರಂತೆ ಓದಬೇಕು ಎಂದು ತಾನು ಸಾಕಿದ್ದ ಹಸುವನ್ನೇ ಮಾರಿ 6 ಸಾವಿರ ರೂ. ಕೊಟ್ಟು ಮೊಬೈಲ್ ಖರೀದಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಕುಲ್ದೀಪ್, ನನ್ನ ಮಕ್ಕಳು ಆನ್‍ಲೈನ್ ತರಗತಿಗೆ ಹಾಜರಾಗಲು ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ನನ್ನ ಕೈಯಲ್ಲಿ ಸಾಧ್ಯವಿರಲಿಲ್ಲ. ಹೀಗಾಗಿ ನಾನು ಸಾಕಿದ್ದ ಹಸುವನ್ನು ಮಾರಲು ನಿರ್ಧರಿಸಿದೆ. ಅಲ್ಲದೆ 6 ಸಾವಿರ ರೂಪಾಯಿಗೆ ಹಸುವನ್ನು ಮಾರಿಬಿಟ್ಟೆ ಎಂದು ಹೇಳಿದ್ದರು. ಈ ಸುದ್ದಿ ವ್ಯಾಪಕ ವೈರಲ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com