ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

Published: 24th July 2020 11:02 AM  |   Last Updated: 24th July 2020 12:26 PM   |  A+A-


file photo

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ನವದೆಹಲಿ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ಅಧಿಕೃತ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದೂ ಸಹ ಪತ್ರದಲ್ಲಿ ಸೂಚಿಸಲಾಗಿದೆ.

‘ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಆದರೂ, ಕೊವಿಡ್‌ ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಯಲು ವಿವಿಧ ಕಾರ್ಯಕ್ರಮಗಳು ಅಥವಾ ಚಟುವಟಿಕೆಗಳನ್ನು ಆಯೋಜಿಸುವಾಗ ಕೆಲ ತಡೆಗಟ್ಟುವಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.’ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಗೃಹಸಚಿವಾಲಯ ಸೂಚಿಸಿದೆ.

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp