ಅಸ್ಸಾಂನಲ್ಲಿ ಪ್ರವಾಹಕ್ಕೆ ಮತ್ತೊಬ್ಬ ಬಲಿ, ಸಾವಿನ ಸಂಖ್ಯೆ 97ಕ್ಕೆ ಏರಿಕೆ

ಅಸ್ಸಾಂನಲ್ಲಿ 26 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿರುವುದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ.
ಅಸ್ಸಾಂ ಪ್ರವಾಹ
ಅಸ್ಸಾಂ ಪ್ರವಾಹ

ಗುವಾಹಟಿ: ಅಸ್ಸಾಂನಲ್ಲಿ 26 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿರುವುದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ.

ಇಂದು ಮಧ್ಯ ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಪ್ರವಾಹದಿಂದ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ಅಲ್ಲದೆ ರಾಜ್ಯದಲ್ಲಿ ಭೂಕುಸಿತದಿಂದ ಇನ್ನೂ 27 ಮಂದಿ ಮೃತಪಟ್ಟಿದ್ದಾರೆ.

ನಿನ್ನೆಯಿಂದ ಪ್ರವಾಹ ಪೀಡಿತ ಜಿಲ್ಲೆಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಪ್ರವಾಹದಿಂದ ಬಾಧಿತರಾದವರ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. 

ಅಸ್ಸಾಂನಲ್ಲಿ 26.37 ಲಕ್ಷಕ್ಕೂ ಹೆಚ್ಚು ಜನರು ಇನ್ನೂ ಸಂಕಷ್ಟದಲ್ಲಿದ್ದು, ಈ ಸಂಖ್ಯೆ ಕಳೆದ ಸಂಜೆಯಿಂದ ಸುಮಾರು ಒಂದು ಲಕ್ಷ ಕಡಿಮೆಯಾಗಿದೆ.

ಪ್ರಮುಖ ನದಿಗಳಾದ ಬ್ರಹ್ಮಪುತ್ರ, ಧನ್ಸಿರಿ, ಜಿಯಾ ಭರಲಿ, ಬೆಕಿ, ಕೋಪಿಲಿ, ಸಂಕೋಷ್ ಮತ್ತು ಕುಶಿಯಾರಾ ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com