ಪ್ರಜಾಪ್ರಭುತ್ವದ ಅತ್ಯಂತ ಕೆಟ್ಟ ರೀತಿಯ ಅಡಚಣೆ: ರಾಜಸ್ಥಾನ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲು ನಿರಾಕರಿಸುತ್ತಿರುವ ರಾಜಸ್ಥಾನ ರಾಜ್ಯಪಾಲ ಕಲರಾಜ್ ಮಿಶ್ರಾ ಅವರ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಜ್ಯಪಾಲರು...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲು ನಿರಾಕರಿಸುತ್ತಿರುವ ರಾಜಸ್ಥಾನ ರಾಜ್ಯಪಾಲ ಕಲರಾಜ್ ಮಿಶ್ರಾ ಅವರ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಜ್ಯಪಾಲರು "ಪ್ರಜಾಪ್ರಭುತ್ವದ ಅತ್ಯಂತ ಕೆಟ್ಟ ರೀತಿಯ ಅಡಚಣೆಯನ್ನು" ಆಶ್ರಯಿಸಿದ್ದಾರೆ ಎಂದು ಭಾನುವಾರ ಆರೋಪಿಸಿದೆ.

ನಮ್ಮ ಪಕ್ಷ ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧವಾಗಿದೆ ಮತ್ತು ಇದಕ್ಕಾಗಿ ಭಿಕ್ಷೆ ಬೇಡುತ್ತಿದೆ. ಆದರೆ ರಾಜ್ಯಪಾಲರು ಅಧಿವೇಶನ ಕರೆಯಬೇಕೆಂಬ ಅಶೋಕ್ ಗೆಹ್ಲೋಟ್ ಸರ್ಕಾರದ ಬೇಡಿಕೆಯ ಬಗ್ಗೆ ದುರುದ್ದೇಶ ಮತ್ತು ಪ್ರೇರಿತ ಪ್ರಶ್ನೆಗಳನ್ನು ಎತ್ತುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಅಭಿಶೇಕ್ ಸಿಂಘ್ವಿ ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಆಜ್ಞೆಯ ಮೇರೆಗೆ ವಿಶ್ವಾಸಮತಯಾಚನೆ ವಿಳಂಬ ಮಾಡುತ್ತಿದ್ದಾರೆ ಎಂದು ಸಿಂಘ್ವಿ ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಅನುಮತಿ ನೀಡಲು ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌, ತಕ್ಷಣ ವಿಧಾನಸಭೆ ಅಧಿವೇಶನ ಕರೆದು, ನಮ್ಮ ಸಾಂವಿಧಾನಿಕ ಹಕ್ಕನ್ನು ರಕ್ಷಿಸಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಿದೆ.

ರಾಜ್ಯಪಾಲ ಮಿಶ್ರಾ ಅವರು ಈಗಾಗಲೇ ವಿಧಾನಸಭಾ ಅಧಿವೇಶನ ಕರೆಯಬೇಕು ಎಂಬ ಒಂದು ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಭಾನುವಾರ ಮತ್ತೆ ಪ್ರಸ್ತಾವನೆ ಸಲ್ಲಿಸಿರುವ ಗೆಹ್ಲೋಟ್‌ ಸರಕಾರ ವಿಶ್ವಾಸಮತ ಸಾಬೀತಿಗೆ ಅಧಿವೇಶನ ಕರೆಯುತ್ತಿಲ್ಲ. ಕೊರೊನಾ ವೈರಸ್‌ ನಿರ್ವಹಣೆಗೆ ಸಂಬಂಧಿಸಿದ ಚರ್ಚೆ ನಡೆಸಲು ಅಧಿವೇಶನಕ್ಕೆ ಅನುಮತಿ ನೀಡಿ ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com