ದೆಹಲಿಯಲ್ಲಿ ಗುಣಮುಖ ಪ್ರಮಾಣ ಶೇ.88ರಷ್ಟಿದ್ದು, ಮತ್ತೆ ಲಾಕ್ಡೌನ್ ಹೇರಿಕೆ ಅಗತ್ಯವಿಲ್ಲ: ಸಿಎಂ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ,88ರಷ್ಟಿದ್ದು, ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ಹೇರಿಕೆ ಮಾಡುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ. 
ಕೇಜ್ರಿವಾಲ್d
ಕೇಜ್ರಿವಾಲ್d

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ,88ರಷ್ಟಿದ್ದು, ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ಹೇರಿಕೆ ಮಾಡುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ದೆಹಲಿಯಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಿದೆ. ದೆಹಲಿಯಲ್ಲಿ ಕೊರೋನಾ ನಿಗ್ರಹಿಸುತ್ತಿರುವ ಮಾದರಿ ಕುರಿತು ಭಾರತ ಹಾಗೂ ವಿದೇಶಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ. ಇದೀಗ ದೆಹಲಿಯಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.88ಕ್ಕೆ ತಲುಪಿದೆ. ಕೇವಲ ಶೇ.9ರಷ್ಟು ಜನರು ಮಾತ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಶೇ.2-3ರಷ್ಟು ಜನರು ಮಾತ್ರ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸಾವಿನ ಸಂಖ್ಯೆ ಕೂಡ ಇಳಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. 

ಜೂನ್ ತಿಂಗಳಿನಲ್ಲಿ ಸಾವಿನ ಪ್ರಮಾಣ ಶೇ.44ರಷ್ಟು ಇಳಿಕೆ ಕಂಡಿತ್ತು. ವೈಯಕ್ತಿಕವಾಗಿ, ಸಾಂಕ್ರಾಮಿಕ ರೋಗದ ಆರಂಭದಿಂದಲೂ ಇದು ನನ್ನ ಪ್ರಮುಖ ಉದ್ದೇಶವಾಗಿದೆ. ಪ್ರಸ್ತುತದ ಬೆಳವಣಿಗೆ ಇನ್ನೂ ಸಂತೃಪ್ತಿ ತಂದಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ತಲುಪಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com