ರಾಜಸ್ತಾನ ರಾಜಕೀಯ ಬಿಕ್ಕಟ್ಟು: ರಾಷ್ಟ್ರಪತಿಗೆ ಪತ್ರ ಬರೆದಿದ್ದೇನೆ, 'ಕೈ' ಶಾಸಕರಿಗೆ ಸಿಎಂ ಗೆಹ್ಲೋಟ್ ಭರವಸೆ!

ರಾಜಸ್ತಾನ ರಾಜಕೀಯ ಪರಿಸ್ಥಿತಿ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ್ದಾರೆ. 
ಗೆಹ್ಲೋಟ್
ಗೆಹ್ಲೋಟ್

ಜೈಪುರ: ರಾಜಸ್ತಾನ ರಾಜಕೀಯ ಪರಿಸ್ಥಿತಿ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ್ದಾರೆ. 

ರಾಜಸ್ತಾನದ ರಾಜಕೀಯ ಬಿಕ್ಕಟ್ಟು ಸಂಬಂಧ ಅಶೋಕ್ ಗೆಹ್ಲೋಟ್ ಕೆಲವು ದಿನಗಳ ಹಿಂದೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದರು.

"ರಾಜಸ್ತಾನದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಗೆ ಮನದಟ್ಟು ಮಾಡಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸಚಿನ್ ಪೈಲಟ್ ಪಡೆಯ ಬಂಡಾಯದ ನಂತರ ಖಾಸಗಿ ಹೋಟೆಲ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ಬಂಡಾಯದ ನಂತರ ಸಚಿನ್ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದರು. 

21 ದಿನಗಳ ನೋಟಿಸ್ ನೀಡಲು ರಾಜ್ಯ ಸರ್ಕಾರ ಒಪ್ಪಿದರೆ ಮಾತ್ರ ರಾಜ್ಯ ವಿಧಾನಸಭೆ ಅಧಿವೇಶನವನ್ನು ಕರೆಯುವುದಾಗಿ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಹೇಳಿದ ನಂತರ ಗೆಹ್ಲೋಟ್ ಅವರು ಮಾತುಗಳನ್ನಾಡಿದ್ದಾರೆ. 

19 ಬಂಡಾಯ ಶಾಸಕರು ಸೇರಿದಂತೆ ಕಾಂಗ್ರೆಸ್ 200 ಸದಸ್ಯರ ವಿಧಾನಸಭೆಯಲ್ಲಿ 107 ಶಾಸಕರನ್ನು ಹೊಂದಿದ್ದು ಬಿಜೆಪಿ 72 ಸ್ಥಾನಗಳನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com