ಪಿಎಂ-ಕೇರ್ಸ್ ನಿಧಿಯಡಿ ಸಂಗ್ರಹಿಸಿರುವ ಹಣವನ್ನು ಎನ್ ಡಿಆರ್ ಎಫ್ ಗೆ ವರ್ಗಾಯಿಸಲು ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ!

ಕೋವಿಡ್- 19 ಸಾಂಕ್ರಾಮಿಕ ರೋಗ ನಿಯಂತ್ರಣ ಉದ್ದೇಶಕ್ಕಾಗಿ ಪಿಎಂ- ಕೇರ್ಸ್ ನಿಧಿ ಅಡಿಯಲ್ಲಿ ಸಂಗ್ರಹಿಸಲಾಗಿರುವ ಎಲ್ಲಾ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್ ) ವರ್ಗಾವಣೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ರೋಗ ನಿಯಂತ್ರಣ ಉದ್ದೇಶಕ್ಕಾಗಿ ಪಿಎಂ- ಕೇರ್ಸ್ ನಿಧಿ ಅಡಿಯಲ್ಲಿ ಸಂಗ್ರಹಿಸಲಾಗಿರುವ ಎಲ್ಲಾ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್ ) ವರ್ಗಾವಣೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಗಳಿಗೆ ಬಜೆಟ್ ಮೂಲಕ ಹಣ ಹಂಚಿಕೆಯಾಗಿದ್ದರೆ ಪಿಎಂ ಕೇರ್ಸ್ ನಿಧಿ ಸ್ವಯಂ ಪ್ರೇರಿತ ನಿಧಿಯಾಗಿದೆ ಎಂದು ಕೇಂದ್ರ ಸರ್ಕಾರದ ಪರ ನ್ಯಾಯಾಲಯದಲ್ಲಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಾಧೀಶ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದರು.

ಯಾರೊಬ್ಬರ ನಿಷ್ಠೆಯನ್ನು ಅನುಮಾನಿಸುತ್ತಿಲ್ಲ. ಆದರೆ, ಸೃಷ್ಟಿ ಮಾಡಲಾಗಿರುವ ಪಿಎಂ ಕೇರ್ಸ್ ನಿಧಿ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ವಕೀಲ ದುಷ್ಯಂತ್ ದವೆ ಆರೋಪಿಸಿದರು.

ಎನ್ ಡಿಆರ್ ಎಫ್ ಲೆಕ್ಕವನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಮೂಲಕ ಪರಿಶೋಧಿಸಲಾಗುತ್ತದೆ ಆದರೆ, ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನು ಖಾಸಗಿ ಆಡಿಟರ್ ಕಡೆಯಿಂದ ಪರಿಶೋಧಿಸುವುದಾಗಿ ಸರ್ಕಾರ ಹೇಳುತ್ತಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಪಿಎಂ ಕೇರ್ಸ್ ನಿಧಿಯಡಿ ಸಂಗ್ರಹಿಸಲಾದ ಹಣವನ್ನು ಎನ್ ಡಿಆರ್ ಎಫ್ ಗೆ ವರ್ಗಾಯಿಸಬೇಕು ಎಂಬ ಅರ್ಜಿ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.ಜೂನ್ 17 ರಂದು ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com