ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಗಳೊಂದಿಗೆ ಹೋಟೆಲ್‌ ಸಂಪರ್ಕ ಕಡಿತಗೊಳಿಸಿ: ಕೇಜ್ರೀವಾಲ್‌ ಆದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ -19 ಪರಿಸ್ಥಿತಿ ಸುಧಾರಣೆ ಕಂಡಿರುವುದರಿಂದ, ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೋಟೆಲ್‌ಗಳ ಸಂಪರ್ಕ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ -19 ಪರಿಸ್ಥಿತಿ ಸುಧಾರಣೆ ಕಂಡಿರುವುದರಿಂದ, ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೋಟೆಲ್‌ಗಳ ಸಂಪರ್ಕ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಕೆಲವು ಹೋಟೆಲ್‌ಗಳನ್ನು ಆಸ್ಪತ್ರೆಗಳಿಗೆ ಜೋಡಿಸಲಾಗಿತ್ತು. ಈಗಿನ ಸುಧಾರಿತ ಪರಿಸ್ಥಿತಿ ಮತ್ತು ಕಳೆದ ಹಲವು ದಿನಗಳಿಂದ ಎಲ್ಲಾ ಹೋಟೆಲ್ ಹಾಸಿಗೆಗಳು ಖಾಲಿ ಇರುವ ಉದ್ದೇಶದಿಂದ ಈ ಹೋಟೆಲ್‌ಗಳನ್ನು ಮುಕ್ತಗೊಳಿಸಲಾಗಿದೆ ಎಂದಿದ್ದಾರೆ.

"ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳು ಯಾವುದೇ ರೋಗಿಯ ಪ್ರತಿಜನಕ ಪರೀಕ್ಷೆಯು ನಕಾರಾತ್ಮಕವಾಗಿದ್ದರೂ ರೋಗಲಕ್ಷಣಗಳನ್ನು ಹೊಂದಿದ್ದರೆ, ಅವರ ಮೇಲೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಬೇಕು. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ" ಎಂದು ಕೇಜ್ರಿವಾಲ್ ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com