ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸಡೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಸೋಮವಾರ ಮಧ್ಯರಾತ್ರಿ ಗಡಿ ಬಳಿ ಬಂದಿರುವ ನಾಲ್ವರು ಉಗ್ರರು ಗಡಿ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನಾಪಡೆಗಳು ಉಗ್ರರ ಚಟುವಟಿಕೆಗಳನ್ನು ಗಮನಿಸಿದ್ದು, ದಿಟ್ಟ ಉತ್ತರ ನೀಡಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಮತ್ತಿಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com