ದೇಶಾದ್ಯಂತ 24 ಗಂಟೆಗಳಲ್ಲಿ 4,46,642 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,46,642 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,46,642 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 4,46,642 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.29ರವರೆಗೂ 1,81,90,382 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಸೋಂಕಿ ಪೀಡಿತರ ಪ್ರಮಾಣ ಶೇ.64.23ಕ್ಕೆ ಏರಿಕೆಯಾಗಿದ್ದು, ಗುಣಮುಖರಾದವರ ಪ್ರಮಾಣ ಶೇ.96.6ಕ್ಕೆ ಹೆಚ್ಚಳವಾಗಿದ್ದು. ಹಾಗೂ ಸಾವಿನ ಪ್ರಮಾಣ ಶೇ.3.4ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com