ಪರೀಕ್ಷೆಗಳನ್ನು ಮಾಡದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದು ನಿಯಮಕ್ಕೆ ವಿರುದ್ಧ: ಯುಜಿಸಿ

ಜುಲೈ 6ರ ಮಾರ್ಗಸೂಚಿ ಪ್ರಕಾರ, ಸೆಪ್ಟೆಂಬರ್ ಕೊನೆಯ ವೇಳೆಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಬದ್ಧವಾಗಿರಬೇಕು ಎಂದು ಕೇಂದ್ರ ಧನಸಹಾಯ ಆಯೋಗ(ಯುಜಿಸಿ) ಸುಪ್ರೀಂ ಕೋರ್ಟ್ ಗೆ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜುಲೈ 6ರ ಮಾರ್ಗಸೂಚಿ ಪ್ರಕಾರ, ಸೆಪ್ಟೆಂಬರ್ ಕೊನೆಯ ವೇಳೆಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಬದ್ಧವಾಗಿರಬೇಕು ಎಂದು ಕೇಂದ್ರ ಧನಸಹಾಯ ಆಯೋಗ(ಯುಜಿಸಿ) ಸುಪ್ರೀಂ ಕೋರ್ಟ್ ಗೆ ಹೇಳಿದೆ.

ಜುಲೈ 6ರ ತನ್ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ನಿನ್ನೆ ಯುಜಿಸಿ ಸುಪ್ರೀಂ ಕೋರ್ಟ್ ನಲ್ಲಿ 50 ಪುಟಗಳ ಅಫಿಡವಿಟ್ ಸಲ್ಲಿಸಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಯುಜಿಸಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ್ದು ಆರೋಗ್ಯ ಮತ್ತು ಸುರಕ್ಷತೆ ಜೊತೆಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿದ್ದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಕಷ್ಟವಾಗುತ್ತದೆ ಎಂದು ಅಫಿಡವಿಟಿನಲ್ಲಿ ಯುಜಿಸಿ ವಿವರಿಸಿದೆ.

ವಿದ್ಯಾರ್ಥಿಗಳ ಕಲಿಕೆ ಪ್ರಕ್ರಿಯೆಯಲ್ಲಿ ಅವರು ಏನು ಕಲಿತುಕೊಂಡಿದ್ದಾರೆ, ಎಷ್ಟು ಜ್ಞಾನ ಹೊಂದಿದ್ದಾರೆ, ಎಷ್ಟು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿದುಕೊಳ್ಳಲು ಇರುವ ಮಾರ್ಗ ಪರೀಕ್ಷೆಗಳನ್ನು ನಡೆಸುವುದು ಎಂದು ಯುಜಿಸಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com