ತಮಿಳುನಾಡಿನಲ್ಲಿ ಕೊರೋನಾಗೆ ಮತ್ತೆ 11 ಬಲಿ, 1,162 ಹೊಸ ಪ್ರಕರಣ, ಚೆನ್ನೈನಲ್ಲಿ ಒಂದೇ ದಿನ 964 ಪಾಸಿಟಿವ್

ನೆರೆಯ ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 1162 ಮಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 23,495ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 1162 ಮಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 23,495ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 184ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ ನಿನ್ನೆ 1,149 ಪ್ರಕರಣಗಳು ವರದಿಯಾಗಿದ್ದವು. ಇಂದು ಮತ್ತೆ 1162 ಪ್ರಕರಣಗಳು ವರದಿಯಾಗಿದ್ದು, ಸತತ ಮೂರನೇ ಬಾರಿಗೆ ಸಾವಿರದ ಗಡಿ ದಾಟಿದೆ.

ಇನ್ನು ಚೆನ್ನೈನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 964 ಹೊಸ ಪ್ರಕರಣಗಳು ಪತ್ತೆಯಾಗಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com