ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿಹಬ್ಬಕ್ಕೆ ಪ್ರಧಾನಿ ಮೋದಿ ಚಾಲನೆ

ದೇಶದಲ್ಲಿಯೇ ಅತ್ಯಂತದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಖ್ಯಾತಿ ಪಡೆದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಹಾಗೂ ಕೊರೋನಾ ನಿಗ್ರಹಕ್ಕೆ ವಿವಿ ವತಿಯಿಂದ ಆರಂಭಿಸಿರುವ ಕೊರೋನಾ ಆವಿಷ್ಕಾರ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ:  ದೇಶದಲ್ಲಿಯೇ ಅತ್ಯಂತದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಖ್ಯಾತಿ ಪಡೆದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಹಾಗೂ ಕೊರೋನಾ ನಿಗ್ರಹಕ್ಕೆ ವಿವಿ ವತಿಯಿಂದ ಆರಂಭಿಸಿರುವ ಕೊರೋನಾ ಆವಿಷ್ಕಾರ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಿಂದ ವಿಡಿಯೋ ಲಿಂಕ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. 

ಜೂನ್.1ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿವಿ ಆರಂಭವಾಗಿ 25 ವರ್ಷ ತುಂಬಿತುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಕಚೇರಿಯಲ್ಲಿರುವ ಧನ್ವಂತರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರವನ್ನು ನಡೆಸಲಾಗುತ್ತಿದೆ. 

ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ, ಮುಖ್ಯಮಂತ್ರಿ ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚುವ ಸುಧಾಕರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದಾರೆ. 

ಆರ್'ಜಿಯುಹೆಚ್ಎಸ್ ದೇಶದಲ್ಲಿಯೇ ಅತ್ಯಂತ ದೊಡ್ಡ ಆರೋಗ್ಯ ವಿಜ್ಞಾನಗಳ ವಿವಿ ಆಗಿದೆ. ವೈದ್ಯಕೀಯ ಕಾಲೇಜುಗಳು, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ 800 ಅಂಗಸಂಸ್ಥೆಗಳನ್ನು ಒಳಗೊಂಡಿದೆ. 2.5ಲಕ್ಷ ವಿದ್ಯಾರ್ಥಿಗಲು ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. 23 ಸಾವಿರ ಬೋಧಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಮೋದಿಯವರು ಮೇ.5ರಂದು ವೈದ್ಯಕೀಯ, ತಂತ್ರಜ್ಞಾನ ಹಾಗೂ ಕೈಗಾರಿಕೋದ್ಯಮಿಗಳ ಸಹಯೋಗದೊಂದಿಗೆ ಕೋವಿಡ್ ವಿರುದ್ಧ ನೂತನ ಆವಿಷ್ಕಾರ ಕೈಗೊಳ್ಳುವಂತೆ ಕರೆ ನೀಡಿದ್ದರು. ಅದರಂತೆ ಐಐಎಂ, ಐಐಐಟಿ, ಜಿಲ್ಲಾ ವೈದ್ಯಕೀಯ ಕಾಲೇಜುಗಳ ಪರಿಣಿತರು ಸೇರಿದಂತೆ ಹಲವಾರು ಸಂಸ್ಥೆಗಳ ಸಹಯೋಗದಲ್ಲಿ ಆವಿಷ್ಕಾರ ಮಾಡಲಾಗುತ್ತಿದೆ. ಈ ಆವಿಷ್ಕಾರಕ್ಕೂ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. 

ವೈವಿಧ್ಯಮಯ ರೀತಿಯಲ್ಲಿ ಪರೀಕ್ಷೆ, ಚಿಕಿತ್ಸಾ ಪದ್ಧತಿ, ಕ್ವಾರಂಟೈನ್, ಸಾರ್ವಜನಿಕ ಆರೋಗ್ಯ, ಪ್ರಯೋಗಾಲಯ ಸೇರಿ ವಿವಿಧ 6 ಕ್ಷೇತ್ರಗಳಲ್ಲಿ ಆವಿಷ್ಕಾರ ನಡೆಸಲಾಗುತ್ತದೆ. ಉತ್ತಮ ಎನಿಸುವ 100 ಐಡಿಯಾಗಳನ್ನು ಆಯ್ಕೆ ಮಾಡಲಾಗುತ್ತದೆ. ಜೂ.8 ರಂದು ಈ ಪೈಕಿ ಉತ್ತಮ ಎನಿಸುವ 15-20 ಆವಿಷ್ಕಾರಗಳನ್ನು ಆಯ್ಕೆ ಮಾಡಲಾಗುತ್ತದೆ. ಒಂದೇ ರೀತಿಯಲ್ಲಿರುವ ಪ್ರಾಜೆಕ್ಟ್ ಗಳನ್ನು ಮೆಂಟರ್ ಶಿಪ್ ಎಂಬ ತಂಡ ರಚಿಸಿ ಸಂಶೋಧನೆ ನಡೆಸಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com