ಕರ್ತವ್ಯದ ವೇಳೆ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣುಖರಾಗಿದ್ದ ಡಾಕ್ಟರ್ ಮತ್ತೆ ಕರ್ತವ್ಯಕ್ಕೆ ಹಾಜರ್!

ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈರಸ್ ಸೋಂಕಿಗೆ ತುತ್ತಾಗಿದ್ದ ವೈದ್ಯರೊಬ್ಬರು ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ:  ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈರಸ್ ಸೋಂಕಿಗೆ ತುತ್ತಾಗಿದ್ದ ವೈದ್ಯರೊಬ್ಬರು ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಹೌದು.. ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ತಾರಕಕ್ಕೇರಿರುವಂತೆಯೇ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರು ಕೂಡ ಸೋಂಕಿಗೆ ತುತ್ತಾಗುತ್ತಿದ್ದರು. ಬಳಿಕ ಚಿಕಿತ್ಸೆ ಪಡೆದು ಗುಣುಮುಖರಾಗಿದ ವೈದ್ಯರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಚೆನ್ನೈನ ಕೊರೋನಾ ಕಂಟೈನ್ ಮೆಂಟ್  ಪ್ರದೇಶವಾಗಿರುವ ಸ್ಟಾನ್ಲಿ ಆಸ್ಪತ್ರೆಯ ನೋಡಲ್ ಅಧಿಕಾರಿ ಹಾಗೂ ವೈದ್ಯ ಡಾ ರವಿ ಅವರು ಸೋಂಕಿಗೆ ತುತ್ತಾಗಿ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ಕೊರೋನಾ ವೈರಸ್ ನಿರ್ವಹಣೆ ಸಂಬಂಧ ಸ್ಟಾನ್ಲಿ ಆಸ್ಪತ್ರೆಯಲ್ಲಿ ರವಿ ಅವರು ನೋಡಲ್ ಅಧಿಕಾರಿಯಾಗಿದ್ದಾರೆ. ಕಳೆದ ಜನವರಿಯಿಂದಲೂ ರವಿ ಆಸ್ಪತ್ರೆಯಲ್ಲಿ ಕರ್ತವ್ಯ ನಿಯೋಜನೆಯಾಗಿದ್ದು, ಅವರಿಗೆ ಸೋಂಕು ತಗುಲಿರುವ ವಿಚಾರವೇ ತಿಳಿಯದೇ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಕೊರೋನಾ  ಲಕ್ಷಣಗಳು ಗೋಚರವಾಗಲು ಆರಂಭಿಸಿದಾಗ ಮುಂಜಾಗ್ರತಾ ಕ್ರಮವಾಗಿ ಸೆಲ್ಫ್ ಕ್ವಾರಂಟೈನ್ ಆಗಿ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಅವರಲ್ಲಿ ಸೋಂಕು ದೃಢವಾಗಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ರವಿ ಅವರು, ಇದೀಗ ಗುಣಮುಖರಾಗಿದ್ದು, ಮತ್ತೆ ಕರ್ತವ್ಯ ಪಾಲನೆಗೆ ಹಾಜರಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, 15 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಮಾರನೇ ದಿನವೇ ಗುಣಮುಖನಾದೆ. ಆದರೆ ಆಯಾಸ ಮತ್ತು ಒಣ ಕೆಮ್ಮು ತೀವ್ರವಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊರೋನಾ ಟೆಸ್ಟ್ ಮಾಡಿಸಿಕೊಂಡೆ. ಆಗ ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಚಿಕಿತ್ಸೆ ಪಡೆದು  ಇದೀಗ ಗುಣಮುಖನಾಗಿದ್ದೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com