24 ಗಂಟೆಗಳಲ್ಲಿ 990 ಹೊಸ ಪಾಸಿಟಿವ್ ಪ್ರಕರಣ; ದೆಹಲಿಯಲ್ಲಿ 20 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ನಿನ್ನೆ ಒಂದೇ ದಿನ 990 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.
ಕೊರೊನಾ ಸೋಂಕು
ಕೊರೊನಾ ಸೋಂಕು

ನವದಹೆಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ನಿನ್ನೆ ಒಂದೇ ದಿನ 990 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.

ದೆಹಲಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದತ್ತಾಂಶದ ಅನ್ವಯ ನಿನ್ನೆ ದೆಹಲಿಯಲ್ಲಿ ಒಂದೇ ದಿನ 990 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 20834ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ 268 ಮಂದಿ ಸೋಂಕಿತರು  ಚಿಕಿತ್ಸೆ ಪಡೆದು ಗುಣುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ದೆಹಲಿಯಲ್ಲಿ ಕೊರೋನಾ ವೈರಸ್ ನಿಂದ ಗುಣಮುಖರಾದವರ ಸಂಖ್ಯೆ 8746ಕ್ಕೆ ಏರಿಕೆಯಾಗಿದೆ.

ಇನ್ನು ದೆಹಲಿಯಲ್ಲಿ ನಿನ್ನೆ ಒಂದೇ ದಿನ 11 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತತ 11565 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com