ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಪಿಎಂ-ಕೇರ್ಸ್ ಫಂಡ್ ಮಾಹಿತಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ: ಕೇಂದ್ರ ಸರ್ಕಾರ ವಿರೋಧ

ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಕೇಂದ್ರ ಸರ್ಕಾರ ಸ್ಥಾಪಿಸಿರುವ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿಯಿಂದ (ಪಿಎಂ ಕೇರ್ಸ್) ಸ್ವೀಕರಿಸಲಾಗಿರುವ ಫಂಡ್ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ ಮನವಿ ಮಾಡಿದೆ.

ನವದೆಹಲಿ:ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಕೇಂದ್ರ ಸರ್ಕಾರ ಸ್ಥಾಪಿಸಿರುವ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿಯಿಂದ (ಪಿಎಂ ಕೇರ್ಸ್) ಸ್ವೀಕರಿಸಲಾಗಿರುವ ಫಂಡ್ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ ಮನವಿ ಮಾಡಿದೆ.

ವಕೀಲ ಅರವಿಂದ್ ವಾಗ್ಮಾರೆ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಬಾಂಬೆ ಹೈಕೋರ್ಟ್ ನ ನಾಗಪುರ ಪೀಠದ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಇದೇ ರೀತಿಯ ಅರ್ಜಿಯನ್ನು ಏಪ್ರಿಲ್ ತಿಂಗಳಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ನ್ಯಾಯಾಧೀಶರಾದ ಎಸ್ ಬಿ ಶುಕ್ರೆ ಮತ್ತು ಎಎಸ್ ಕಿಲೊರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು. 

ಅರ್ಜಿಯು ವಿಭಿನ್ನ ಪರಿಹಾರವನ್ನು ಕೋರಿದ್ದು, ಕೇಂದ್ರಸರ್ಕಾರ ಎರಡು ವಾರದೊಳಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ವಿಭಾಗೀಯ ಪೀಠ ಸೂಚಿಸಿದೆ. ಅಫಿಡವಿಟ್ ನಲ್ಲಿ ಕೇಂದ್ರಸರ್ಕಾರದ ನಿಲುವನ್ನು ತಿಳಿಸುವಂತೆ ನ್ಯಾಯಾಲಯ ಹೇಳಿದೆ. 

ಪಿಎಂ- ಕೇರ್ಸ್ ನಿಧಿಯಡಿ ಸಂಗ್ರಹಿಸಲಾಗಿರುವ ಫಂಡ್ ಮತ್ತು ವೆಚ್ಚದ ಬಗ್ಗೆ ಸರ್ಕಾರದ ವೆಬ್ ಸೈಟ್ ನಲ್ಲಿ ನಿಯತಕಾಲಿಕವಾಗಿ ಪ್ರಕಟಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಾಗ್ಮರೆ ಅರ್ಜಿ ಸಲ್ಲಿಸಿದ್ದಾರೆ. 

ಅರ್ಜಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಪಿಎಂ- ಕೇರ್ಸ್ ಟ್ರಸ್ಟ್ ಅಧ್ಯಕ್ಷರಾಗಿದ್ದು, ರಕ್ಷಣೆ, ಗೃಹ ಮತ್ತು ಹಣಕಾಸು ಸಚಿವರು ಅದರ ಸದಸ್ಯರಾಗಿದ್ದಾರೆ.ಇದರ ಮಾರ್ಗಸೂಚಿ ಪ್ರಕಾರ ಇತರ ಮೂವರು ಟ್ರಸ್ಟಿಗಳನ್ನು ಪ್ರಧಾನಿ ನೇಮಕ ಮಾಡಿಕೊಳ್ಳಬಹುದಾಗಿದೆ.ಆದಾಗ್ಯೂ, ಈವರೆಗೂ ಯಾರನ್ನೂ ನೇಮಕ ಮಾಡಿಕೊಂಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com