ಕೊರೋನಾ ವೈರಸ್: ದೇಶಾದ್ಯಂತ 24 ಗಂಟೆಗಳಲ್ಲಿ 8,171 ಹೊಸ ಪಾಸಿಟಿವ್ ಪ್ರಕರಣಗಳು, 204 ಸೋಂಕಿತರು ಸಾವು

ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರಿಸಿದ್ದು, ದಿನೇ ದಿನೇ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 204 ಸೋಂಕಿತರು ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರಿಸಿದ್ದು, ದಿನೇ ದಿನೇ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 204 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ. ಅಂತೆಯೇ 24 ಗಂಟೆಗಳಲ್ಲಿ 204 ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5,598ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 97,581 ಸಕ್ರಿಯ ಪ್ರಕರಣಗಳಿದ್ದು, 95,526 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿನ ಕೊರೋನಾ ವೈರಸ್ ಸ್ಥಿತಿಗತಿ ಇಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com